ಶಾಲಾ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ

hnl bisiyuta nov 13
Published on

ಹೊನ್ನಾಳಿ: ಕರೊನಾ ಕಾರಣಕ್ಕೆ ಶಾಲೆಗಳು ಬಂದ್ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಊಟದ ಬದಲು ಆಹಾರ ಧಾನ್ಯ ವಿತರಿಸಲಾಗುತ್ತಿದೆ ಎಂದು ತಾಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ತಿಳಿಸಿದರು.

ಪಟ್ಟಣದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶುಕ್ರವಾರ ಬಿಸಿಯೂಟ ಯೋಜನೆಯಡಿ ಅಕ್ಕಿ, ಬೇಳೆ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತಿ ಸಾಧಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಇ. ರಾಜೀವ್ ಮಾತನಾಡಿ, ಶಾಲೆ ಆರಂಭದ ಬಗ್ಗೆ ಸರ್ಕಾರದಿಂದ ಯಾವುದೇ ಸುತ್ತೋಲೆಗಳು ಬಂದಿಲ್ಲ. ಬಂದ ನಂತರ ಅದರಂತೆ ನಡೆದುಕೊಳ್ಳಲಾಗುವುದು ಎಂದರು.

ಶಿಕ್ಷಕ ವಾಜಿದ್ ಸಾಬ್, ಅಕ್ಷರ ದಾಸೋಹ ಸಿಬ್ಬಂದಿ ಉಪಸ್ಥಿತರಿದ್ದರು. ಎಲ್ಲ ಮಕ್ಕಳು ತಮ್ಮ ಪಾಲಕರೊಂದಿಗೆ ಆಗಮಿಸಿ ಆಹಾರ ಧಾನ್ಯ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net