ಸನ್ಮಾನ- ಗಾಯನ ಕಾರ್ಯಕ್ರಮ

24 Dwd 2 Radha Desai
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಸರಸ್ವತಿ ಸಂಗೀತ ವಿದ್ಯಾಲಯ ಹಾಗೂ ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ಅ. 26ರಂದು ನಗರದಲ್ಲಿ ಸನ್ಮಾನ ಹಾಗೂ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಗೀತ ವಿದ್ಯಾಲಯದ ಕಾರ್ಯದರ್ಶಿ ರಾಧಾ ದೇಸಾಯಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮÁತನಾಡಿದ ಅವರು, ಇಲ್ಲಿನ ಆಲೂರು ವೆಂಕಟರಾವ್ ಭವನದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಧಾರವಾಡ ಐಐಟಿ ಪ್ರಾಧ್ಯಾಪಕ ಪ್ರೊ. ಎಸ್.ಎಂ. ಶಿವಪ್ರಸಾದ ಅವರನ್ನು ಸನ್ಮಾನಿಸಲಾಗುವುದು. ಹುಬ್ಬಳ್ಳಿಯ ಮಿವೆಲ್ ಮೇಘ್ರಾನ್ ಕನ್ವೇಯರ್ಸ್ ಅಧ್ಯಕ್ಷ ವಿಕ್ರಮ ಶಿರೂರ, ರಂಗಕರ್ಮಿ ಶಶಿಧರ ನರೇಂದ್ರ ಮತ್ತು ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿದ್ಯಾಲಯದ ಅಧ್ಯಕ್ಷ ಉದಯ ದೇಸಾಯಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಪ್ತಕ ಸಂಸ್ಥೆಯ ಮುಖ್ಯಸ್ಥ ಜಿ.ಎಸ್. ಹೆಗಡೆ ಅಧ್ಯಕ್ಷತೆ ವಹಿಸುವರು ಎಂದರು.

ಬಳಿಕ ನಾಂದೇಡದ ಧನಂಜಯ ಜೋಶಿ ಅವರ ಗಾಯನಕ್ಕೆ ಧಾರವಾಡದ ಶ್ರೀಧರ ಮಾ0ಡ್ರೆ ತಬಲಾ ಹಾಗೂ ಬಸವರಾಜ ಹಿರೇಮಠ ಹಾರ್ಮೋನಿಯಂ ಸಾಥ್ ನೀಡುವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net