

ಉಳ್ಳಾಲ: ಉಳ್ಳಾಲದಲ್ಲಿ ಕಾಂಗ್ರೆಸ್‌ನಲ್ಲಿ ಭಿನ್ನಮತ, ಬಣ ಎನ್ನುವುದಿಲ್ಲ. ಇಲ್ಲಿ ಏನಿದ್ದರೂ ಖಾದರ್ ಬ್ರಿಗೇಡ್ ಮಾತ್ರ ಇರುವುದು. ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಗೌರವಿಸುವುದು ನಮ್ಮ ಕರ್ತವ್ಯ. ಉಳ್ಳಾಲ ಉರುಸ್ ಸಂದರ್ಭದಲ್ಲೂ ತಮ್ಮಿಂದಾದ ಸೇವೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಕಾಶ್ ಕುಂಪಲ ಹೇಳಿದರು. ಉಳ್ಳಾಲ ಬ್ಲಾಕ್ ಸಮಿತಿಯಿಂದ ಸೋಮೇಶ್ವರ ಪುರಸಭೆಯಲ್ಲಿ ನಾಮನಿರ್ದೇಶನಗೊಂಡ ಸದಸ್ಯರು, ಯುವಕಾಂಗ್ರೆಸ್ ಪದಾಧಿಕಾರಿಗಳಿಗೆ ಭಾನುವಾರ ತೊಕ್ಕೊಟ್ಟಿನಲ್ಲಿ ನಡೆದ ಸನ್ಮಾನ ಸಮಾರಂಭದ ನೇತೃತ್ವ ವಹಿಸಿ ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮುಸ್ತಫಾ ಹರೇಕಳ ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ದಿನೇಶ್ ರೈ, ನಗರಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ದಿವ್ಯಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್, ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಯುವಕಾಂಗ್ರೆಸ್ ಅಧ್ಯಕ್ಷ ನವಾಝ್ ನರಿಂಗಾನ, ಕಚೇರಿ ಕಾರ್ಯದರ್ಶಿ ಮನ್ಸೂರ್ ಮಂಚಿಲ ಮೊದಲಾದವರು ಉಪಸ್ಥಿತರಿದ್ದರು. ಕೊಣಾಜೆ ಗ್ರಾಪಂ ಮಾಜಿ ಅಧ್ಯಕ್ಷ ಶೌಕತ್ ಅಲಿ ಕೊಣಾಜೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಎ.ಕೆ.ಅಬ್ದುಲ್ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.
ಶೈಕ್ಷಣಿಕ ಜೀವನದ ಬಳಿಕ ಯುವ ಕಾಂಗ್ರೆಸ್‌ನಲ್ಲಿ ಕಾರ್ಯನಿರ್ವಹಿಸಿದಾಗ ಪಕ್ಷದಲ್ಲಿ ಅವಕಾಶ ಪಡೆಯಲು ಸಾಧ್ಯ. ಇದು ಅಭಿನಂದನಾ ಕಾರ್ಯಕ್ರಮ ಎನ್ನುವ ಭಾವನೆ ಬೇಡ, ಪಕ್ಷದಲ್ಲಿ ಜವಾಬ್ದಾರಿ ಹೆಚ್ಚಿಸುವ ಕಾರ್ಯ ಎನ್ನುವ ಭಾವನೆ ನೂತನ ಪದಾಧಿಕಾರಿಗಳಲ್ಲಿ ಇರಬೇಕು. ಮುಸ್ತಫಾ ಹರೇಕಳ ಉಪಾಧ್ಯಕ್ಷ, ಉಳ್ಳಾಲ ಬ್ಲಾಕ್ ಕಾಂಗ್ರೆಸ್