ಸ್ವಾತಂತ್ರ್ಯ ಹೋರಾಟಗಾರರ ಗೌರವ ಅನುಕರಣೀಯ

karantha
ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಮಾತನಾಡಿದರು.
Published on

ಕೋಟ: ಸ್ವಾತಂತ್ರ್ಯ ಹೋರಾಟಗಾರರ ನೆನಪು ಸ್ವಾತಂತ್ರ್ಯೋತ್ಸವ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗ ಸ್ಮರಿಸಿಕೊಳ್ಳವುದು ಅಗತ್ಯದ ವಿಷಯ. ಈ ದಿಸೆಯಲ್ಲಿ ಈ ಕಾರ‌್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಹೇಳಿದರು.

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಪಂ ಪ್ರಸ್ತುತಿ ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಥೀಂ ಪಾರ್ಕ್ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್ ಅಧ್ಯಕ್ಷತೆ ವಹಿಸಿ, ಕುಟುಂಬಸ್ಥರನ್ನು ಗೌರವಿಸಿದರು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ, ಸ್ವರಾಜ್ 75ರ ಸಂಘಟಕ ಪ್ರದೀಪ್ ಕುಮಾರ್ ಬಸ್ರೂರು, ಟ್ರಸ್ಟಿಗಳಾದ ಸುಬ್ರಾಯ ಆಚಾರ್ ಮಣೂರು, ಸುಶೀಲಾ ಸೋಮಶೇಖರ್ ಉಪಸ್ಥಿತರಿದ್ದರು. ಸತೀಶ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ನರೇಂದ್ರ ಕುಮಾರ್ ಕೋಟ ವಂದಿಸಿದರು. ಬಳಿಕ ಕುಟುಂಬಸ್ಥರೊಂದಿಗೆ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿವೇಕ ಬಾಲಕಿಯರ ಪ್ರೌಢಶಾಲೆಯ ಸಮಾಜವಿಜ್ಞಾನ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಸಂವಾದ ನಡೆಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net