

ರಾಯಚೂರು ನ್ಯಾಯಾಂಗಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಆಡಳಿತದಲ್ಲಿರುವ ಯಾವುದೇ ಸರ್ಕಾರದ ಜವಾಬ್ದಾರಿಯಾಗಿರುತ್ತದೆಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮAದಿರದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದಿAದ ಭಾನುವಾರ ಜಿಲ್ಲೆಯ ಜನಪ್ರತಿನಿಽಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಹಾಗೂ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬೇಕಾದ ಅಗತ್ಯ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದರು. ವಕೀಲರೆಂದರೆ ಕೇವಲ ಕೋರ್ಟ್ನಲ್ಲಿ ವಾದ ಮಾಡುವವರಲ್ಲಿ ಜಿಲ್ಲೆಯ ಅಭಿವೃದ್ದಿ ಹಾಗೂ ಸಮಾಜದ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವ ಮಾಗದರ್ಶಕರಾಗಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ನ್ಯಾಯವಾದಿಗಳ ಸಲಹೆ ಸಹಕಾರ ಅತ್ಯಂತ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಈಗಾಗಲೇ ಕೆಕೆಆರ್‌ಡಿಬಿ ಅನುದಾನದಲ್ಲಿ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೆಕೆಆರ್‌ಡಿಬಿ ಅನುದಾನದಲ್ಲಿ ೧೨೭೫ ಕೋಟಿ ರೂ.ಗಳನ್ನು ಶಿಕ್ಷಣ ಇಲಾಖೆಯ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದಂತೆ ಜಿಲ್ಲೆಗೆ ಏಮ್ಸ್ ಮಂಜೂರು ಮಾಡಿಸುವ ಕುರಿತಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಏಮ್ಸ್ ರಾಯಚೂರಿಗೆ ನೀಡಲು ಕೇಂದ್ರಕ್ಕೆ ಪತ್ರಗಳನ್ನು ಬರೆದಿದ್ದು, ಸಚಿವರ ನಿಯೋಗವು ಕೂಡ ಕೇಂದ್ರ ವೈದ್ಯಕೀಯ ಶಿಕ್ಷಣ, ಆರೋಗ್ಯ ಇಲಾಖೆಯ ಸಚಿವರನ್ನು ಭೇಟಿ ಮಾಡಿದೆ ಎಂದೆ ಉಳಿದಂತೆ ಜಿಲ್ಲೆಯ ಕೊನೆ ಭಾಗದ ರೈತರಿಗೆ ಸಮರ್ಪಕ ನೀರು ಹಾಗೂ ಜಿಲ್ಲೆಯ ಎಲ್ಲ ರೈತರಿಗೆ ಸಮರ್ಪಕ ವಿದ್ಯುತ್ ನೀಡುವುದು ಸರ್ಕಾರ ಮುಖ್ಯ ಉದ್ದೇಶವಾಗಿದೆಂದರು.
ಈ ಸಂದರ್ಭದಲ್ಲಿ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಲಕ್ಷ÷್ಮಪ್ಪ ಭಂಡಾರಿ, ಉಪಾಧ್ಯಕ್ಷ ನಜೀರ್ ಅಹ್ಮದ್ ಶೇರ್ ಅಲಿ, ಜಂಟಿ ಕಾರ್ಯದರ್ಶಿ ಹನುಮಂತಪ್ಪ ಮೇಟಿ, ಎನ್. ಶಂಕ್ರಪ್ಪ, ಪಾಂಡುರAಗ ನಾಯಕ, ಮಸ್ಕಿ ನಾಗರಾಜ, ಜಿ.ಎಸ್ ವೀರಭದ್ರಪ್ಪ, ಪಿ.ರಾಘವೇಂದ್ರ, ಶ್ರೀಕಾಂತ ರಾವ್, ಜಗದೀಶ ಸೇರಿದಂತೆ ಇತರರಿದ್ದರು.
-------------