ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನ

28sunti01
Published on

ಸುಂಟಿಕೊಪ್ಪ: ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


1980-81ನೇ ಸಾಲಿನ ವಿದ್ಯಾರ್ಥಿಗಳಾದ ಡಾ. ಅಕ್ಕಪಂಡ ತಮ್ಮಯ್ಯ ನೇತೃತ್ವದಲ್ಲಿ ಕೆ.ಡಿ.ಪ್ರಕಾಶ್, ಪಿ.ಪಿ.ಸುಬ್ರಮಣಿ, ಎಫ್.ಬಿ.ಅಶೋಕ, ಕೆ.ಆರ್.ವಾಸು, ರಾಮಕೃಷ್ಣ, ಐ.ಎಸ್.ಗಣೇಶ, ವೀಣಾ ಅವರು ನೂತನ ಕಟ್ಟಡ ನಿರ್ಮಿಸಲು 1,50,000 ರೂ.ಗಳನ್ನು ದೇಣಿಗೆಯಾಗಿ ಆಡಳಿತ ಮಂಡಳಿಗೆ ನೀಡಿದರು.


ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಲವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಪ್ರತಿನಿಧಿಸಲು ಆಯ್ಕೆಯಾಗಿರುವ ಬಾಲ ವಿಜ್ಞಾನಿ ಎ.ಎಸ್.ಶ್ರೀಶಾ ಮತ್ತು ಸಾಕ್ಷರತಾ ಇಲಾಖೆ ನಡೆಸಿದ ಪ್ರಾಚ್ಯಪ್ರಜ್ಞೆ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಟಿ.ಎಸ್.ಫಾತಿಮತ್ ಸಹಲ ಅವರನ್ನು ಸನ್ಮಾನಿಸಲಾಯಿತು.


ಶಾಲಾಡಳಿತ ಮಂಡಳಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಶಿಕ್ಷಕಿ ಕೆ.ಎಸ್.ಇಂದಿರಾ, ನಿವೃತ್ತ ಮುಖ್ಯಶಿಕ್ಷಕಿ ಕೆ.ಎ.ಸಾವಿತ್ರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net