ಮಂತ್ರಾಲಯ ಶ್ರೀಗಳಿಗೆ ಗೌರವ ಡಾಕ್ಟರೇಟ್​; ಗುಲ್ಬರ್ಗ ವಿವಿ ಘೋಷಣೆ

Untitled-1
Published on

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್​ ನೀಡಿ ಗೌರವಿಸಲು ಗುಲ್ಬರ್ಗ ವಿಶ್ವವಿದ್ಯಾಲಯ ನಿರ್ಧರಿಸಿದೆ. ವಿಶ್ವವಿದ್ಯಾನಿಲಯದಲ್ಲಿ ನ. 20ರಂದು ನಡೆಯಲಿರುವ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್​ ಪ್ರದಾನ ನಡೆಯಲಿದೆ.

ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್​ಗೆ ಆಯ್ಕೆ ಮಾಡಲಾಗಿದೆ. ಧಾರ್ಮಿಕತೆ ಜತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯವು ತಿಳಿಸಿದೆ.

ಅಪಾರ ಪಾಂಡಿತ್ಯ ಹೊಂದಿರುವ ಶ್ರೀಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚುವುದರ ಜತೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ್ದು ಅವರ ಸೇವೆ ಗುರುತಿಸಿ ಆಯ್ಕೆ ಮಾಡಲಾಗಿದೆ.

ವಿಶ್ವವಿದ್ಯಾಲಯವು ಸಿಂಡಿಕೇಟ್ ಮೂಲಕ ೧೦ ಜನರ ಹೆಸರನ್ನು ಶಿಫಾರಸು ಮಾಡಿದ್ದು, ಸಮಿತಿಯು ಹತ್ತರಲ್ಲಿ ಮೂವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಮಂತ್ರಾಲಯ ಶ್ರೀಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net