ಅಂಗವಿಕಲರ ಸಂಸ್ಥೆಯ ಅಧ್ಯಕ್ಷರಿಗೆ ಗೌರವ ಡಾಕ್ಟರೇಟ್

web 6
Published on

ಧಾರವಾಡ: ನಗರದ ಸಮರ್ಥನಂ ಅಂಗವಿಕಲರ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಜಿ.ಕಿವುಡಸಣ್ಣವರ ಅವರಿಗೆ ಆಂಧ್ರಪ್ರದೇಶದ ಅನಂತಪುರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ೩೧ನೇ ಘಟಿಕೋತ್ಸವ ಸಮÁರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್‌ನಜೀರ್ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಉನ್ನತ ಶಿಕ್ಷಣ ಸಚಿವ ಬೊಟ್ಸಾ ಸತ್ಯನಾರಾಯಣ, ಉಪ ಕುಲಪತಿ ಪ್ರೊ. ರಾಮಕೃಷ್ಣ ರೆಡ್ಡಿ, ಇತರರಿದ್ದರು.
ಮಹಾಂತೇಶ ಅವರು ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದವರು. ಜನ್ಮತಃ ಅಂಧರಾಗಿರುವ ಅವರು, ತಮ್ಮಂಥ ಅಂಧ- ಅಂಗವಿಕಲ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ದೇಶಾದ್ಯಂತ ೧೩ ಹಾಗೂ ಯುಕೆ, ಅಮೆರಿಕದಲ್ಲಿ ಸಮರ್ಥನಂ ಅಂಗವಿಕಲ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಸಂಸ್ಥೆಯ ವಿವಿಧ ಕೇಂದ್ರಗಳಲ್ಲಿ ಸಾವಿರಕ್ಕೂ ಹೆಚ್ಚು ಅಂಗವಿಕಲ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ದಾನಿಗಳ ನೆರವಿನಿಂದ ಉಚಿತ ಊಟ, ವಸತಿ ವ್ಯವಸ್ಥೆ ಮಾಡುತ್ತ, ಉದ್ಯೋಗಾಧಾರಿತ ಕೌಶಲಾಭಿವೃದ್ಧಿ ತರಬೇತಿ ನೀಡುತ್ತಿದ್ದಾರೆ. ಅವರ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net