

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದ ೩೬ನೇ ಘಟಿಕೋತ್ಸವದಲ್ಲಿ ಇಬ್ಬರು ಸಾಧಕರಿಗೆ `ಗೌರವ ಡಾಕ್ಟರೇಟ್' ಪ್ರದಾನ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆಯ ಪದ್ಮಶ್ರೀ ತುಳಸಿಗೌಡ ಹಾಗೂ ಅಣ್ಣಿಗೇರಿಯ ವಿಶ್ವಶಾಂತಿ ಕೃಷಿ ಸಂಶೋಧನಾ ಕೇಂದ್ರದ ಪದ್ಮಶ್ರೀ ಅಬ್ದುಲ್‌ಖಾದರ ಇಮಾಮ್‌ಸಾಬ ನಡಕಟ್ಟಿನ ಅವರಿಗೆ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ.