ಆರೋಗ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ

29 MYK
Published on

ಮಾಯಕೊಂಡ: ಕೊರೊನಾ ಸಮಯದಲ್ಲಿ ಕಾರ್ಯನಿರ್ವಹಿಸಿದ ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಯನ್ನಾಗಿಸಲು ಶ್ರಮಿಸಿದ ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಗ್ರಾಪಂ ಸಿಬ್ಬಂದಿಯ ಸೇವೆ ಅತ್ಯಂತ ಶ್ಲಾಘನೀಯ ಎಂದು ಗ್ರಾಪಂ ಅಧ್ಯಕ್ಷೆ ಜ್ಯೋತಿ ಮಹಾಬಲೇಶ್ ಹೇಳಿದರು.

ಮಾಯಕೊಂಡ ಹೋಬಳಿಯ ಹುಚ್ಚವ್ವನಹಳ್ಳಿ ಗ್ರಾಪಂ ಕಚೇರಿ ಆವರಣದಲ್ಲಿ ಶುಕ್ರವಾರ ಗ್ರಾಪಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊರೊನಾ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ಮತ್ತು ಕ್ಷಯಮುಕ್ತ ಗ್ರಾಪಂ ಮಾಡಲು ಸೇವೆ ಸಲ್ಲಿಸಿದ್ದ ಸಿಬ್ಬಂದಿಯನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಮಾಡಿದ ಹಾಗೂ ಗ್ರಾಮವನ್ನು ಕ್ಷಯಮುಕ್ತಗೊಳಿಸಲು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಿದ ಸಿಬ್ಬಂದಿಗೆ ಅಭಿನಂದಿಸಲಾಯಿತು ಎಂದರು.

ಪಿಡಿಒ ಎನ್. ಸೋಮಶೇಖರ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಶ್ರಮಿಸಿದವರಿಗೆ ಸನ್ಮಾನಿಸಿ ಅಭಿನಂದಿಸಲು ಬಹಳ ದಿನಗಳಿಂದ ಪ್ರಯತ್ನಿಸಲಾಗುತ್ತಿತ್ತು. ಅದು ಈಗ ಈಡೇರಿದೆ ಎಂದು ತಿಳಿಸಿದರು.

ಹುಚ್ಚವ್ವನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ನೀರಗಂಟಿಗಳು, ಮಹಿಳಾ ಸಂಘದ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಗ್ರಾಪಂ ಉಪಾಧ್ಯಕ್ಷ ಕೆ.ಜಿ. ಸತೀಶ್, ಮಾಜಿ ಅಧ್ಯಕ್ಷ ಆರ್.ಸಿ. ಗಣೇಶ್, ಉಮಾಪತಿ, ಕಾರ್ಯದರ್ಶಿ ರುದ್ರೇಶ್, ಸದಸ್ಯರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net