ಕಾಂಗ್ರೆಸ್ ವತಿಯಿಂದ ಸನ್ಮಾನ

21 gkp 01
ವಿರಾಜಪೇಟೆ ಕ್ಷೇತ್ರದ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ತೆರೇಸಾ ವಿಕ್ಟರ್, ಗೋಣಿಕೊಪ್ಪ ಗ್ರಾಪಂ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಹಾಗೂ ಉಪಾಧ್ಯಕ್ಷೆ ಎಂ.ಮಂಜುಳಾ ಅವರನ್ನು ಹಾತೂರು ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
Published on

ಗೋಣಿಕೊಪ್ಪ: ವಿರಾಜಪೇಟೆ ಕ್ಷೇತ್ರದ ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ತೆರೇಸಾ ವಿಕ್ಟರ್, ಗೋಣಿಕೊಪ್ಪ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ಕುಲ್ಲಚಂಡ ಪ್ರಮೋದ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಂ.ಮಂಜುಳಾ ಅವರನ್ನು ಹಾತೂರು ವಲಯ ಕಾಂಗ್ರೆಸ್ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.

ಹಾತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೊಕ್ಕಂಡ ರೋಶನ್ ಅಧ್ಯಕ್ಷತೆಯಲ್ಲಿ ಸಿಲ್ವರ್ ಸ್ಕೈ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಹಾಗೂ ಕೊಕ್ಕಂಡ ಕಾವೇರಪ್ಪ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಲೀರ ಸಾದಲಿ, ಹಿರಿಯರಾದ ವಿ.ಟಿ.ವಾಸು, ದೊಡ್ಮನೆ ವಿಠಲಗೌಡ, ಗೋಣಿಕೊಪ್ಪ ಗ್ರಾಪಂ ಸದಸ್ಯ ಚೆಪ್ಪುಡೀರ ಧ್ಯಾನ್ ಸುಬ್ಬಯ್ಯ, ಮಾಜಿ ಸದಸ್ಯ ರಾಜಶೇಖರ್, ಪ್ರಮುಖರಾದ ಶಿವಾಜಿ, ನೂರೇರ ಧನ್ಯ, ಬೇಬಿ, ಪುಲಿಯಂಡ ರೋಷನ್, ಶ್ರೇಯಸ್ಸ್, ಬೊಳ್ಳಿ, ಸುರೇಶ್, ಅಮ್ಜು, ಸುರೇಶ್, ಮಧುಸೂದನ್ ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net