ಸಾಧಕ ವಿದ್ಯಾರ್ಥಿನಿ ಮನಾಲಿಗೆ ಸನ್ಮಾನ

gan (21)
Published on

ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ, ವೈಷ್ಣವಿ ಇವೆಂಟ್ಸ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 7ನೇ ರ‌್ಯಾಂಕ್ ಪಡೆದ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ವಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಮನಾಲಿ ಎಂ. ಅವರನ್ನು ಶಾಲೆ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.

ವೈಷ್ಣವಿ ಇವೆಂಟ್ಸ್ ವಾಲೀಕ ಗೋಪಾಲ ಚಂದನ್, ಬಿಲ್ಲವ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್.ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನ ಪಾತ್ರಿ ರುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ, ನಿವೃತ್ತ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಮತ್ತು ಬಿಲ್ಲವ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಜಿ.ಎ.ಆರ್.ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net