ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಿಗೆ ಸನ್ಮಾನ

ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು. ಟಿ.ಎಂ.ಶಹೀದ್, ಕೆ. ಎಂ.ಮುಸ್ತಫ ಇದ್ದರು.
ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು. ಟಿ.ಎಂ.ಶಹೀದ್, ಕೆ. ಎಂ.ಮುಸ್ತಫ ಇದ್ದರು.
Published on

ನಾಪೋಕ್ಲು: ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸನ್ಮಾನಿಸಿದರು.

ಸುಳ್ಯ ಗ್ರಾಮೀಣ ಭಾಗದಲ್ಲಿನ ವಿದ್ಯುತ್ ಸಮಸ್ಯೆ ಮತ್ತು 110 ಕೆವಿ ವಿದ್ಯುತ್ ಕಾಮಗಾರಿ ಕುರಿತು ಅಧ್ಯಕ್ಷರೊಂದಿಗೆ ಚರ್ಚಿಸಲಾಯಿತು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷ ಹರೀಶ್ ಕುಮಾರ್, ಶೀಘ್ರ ಸುಳ್ಯಕ್ಕೆ ಭೇಟಿ ನೀಡಿ ಸಭೆ ನಡೆಸುವುದಾಗಿ ತಿಳಿಸಿದರು.

ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ.ಮುಸ್ತಫ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net