5 ರಂದು ಶಿಕ್ಷಕರಿಗೆ ಸನ್ಮಾನ

DR SARVAPALLI RADHAKRISHNA
Published on

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆ.5 ರಂದು ಬೆಳಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕ ಕೆ.ಹರೀಶ್‌ಗೌಡ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net