ಕಲಾವೈಭವದಲ್ಲಿ ಸಾಧಕರಿಗೆ ಸನ್ಮಾನ

New Project (12)
Published on

ಬಂಟ್ವಾಳ: ಮಂಗಳೂರು ಹಾಗೂ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಮೈಟ್ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರಸ್ತುತಿಯ ಕಲಾವೈಭವ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿ ನಡೆಯಿತು.

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ಅವರನ್ನು ಸನ್ಮಾನಿಸಲಾಯಿತು.

ರಂಗಕರ್ಮಿ ಶಶಿರಾಜ್ ರಾವ್ ಕಾವೂರು ಮಾತನಾಡಿ, ಮಕ್ಕಳನ್ನು ಬಾಲ್ಯದಲ್ಲಿಯೇ ಸಾಂಸ್ಕೃತಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಮುಂದೆ ಆ ಕ್ಷೇತ್ರದಲ್ಲಿ ಸಾಧನೆ ಮಾಡುವ ಜತೆಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯುತ್ತಾರೆ ಎಂದರು.

ಪುತ್ತೂರಿನ ಬಿಲ್ಡರ್ ಅಬ್ದುಲ್ ರೆಹಮಾನ್, ಪ್ರಾಂಶುಪಾಲ ರಾಕೇಶ್‌ಕುಮಾರ್ ಮಾತನಾಡಿದರು. ರಂಗನಟ ಪ್ರಿತೇಶ್‌ಕುಮಾರ್, ಉಪಪ್ರಾಂಶುಪಾಲೆ ನಿಶ್ಮಿತಾ ರಾಕೇಶ್, ವಿಭಾಗ ಮುಖ್ಯಸ್ಥರಾದ ಮೊಮ್ಮಹದ್ ಆಶ್ರಫ್, ಐಶ್ವರ್ಯಾ ಪ್ರಸಾದ್, ವಿದ್ಯಾರ್ಥಿ ನಾಯಕರಾದ ಮಿಥುನ್, ಸಾಂಸ್ಕೃತಿಕ ಕಾರ್ಯದರ್ಶಿ ಬಾಯಿಝ್ ಉಪಸ್ಥಿತರಿದ್ದರು. ಉಪನ್ಯಾಸಕಿ ನಿಶ್ಮಿತಾ ಸ್ವಾಗತಿಸಿದರು. ಗೀತಾ ವಂದಿಸಿದರು. ಚೇತನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net