

ಕೊಳ್ಳೇಗಾಲ: ಐಐಟಿ- ಜೆಇಇ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಲಯನ್ಸ್ ಪದವಿಪೂರ್ವ ವಿಜ್ಞಾನ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ಬುಧವಾರ ಆಡಳಿತ ಮಂಡಳಿ ಸದಸ್ಯರು ಸನ್ಮಾನಿಸಿ ಅಭಿನಂದಿಸಿದರು.
ಪಟ್ಟಣದ ಲಯನ್ಸ್ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ಎಸ್.ಜೀವನ್ ಶೇ.91.10, ಜಿ.ದಿಗಂತ್. ಶೇ.90.91, ಪಿ.ಖುಶ್ವಂತ್ ಶೇ.85.52, ಎನ್.ಪುನೀತ್ ಶೇ.81.36 ರಷ್ಟು ಗಳಿಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿದರು.
ಲಯನ್ ಸಂಸ್ಥೆ ಕೋಶಾಧ್ಯಕ್ಷ ಎಸ್.ನಾಗರಾಜು ಮಾತನಾಡಿ, ಲಯನ್ಸ್ ಕಾಲೇಜು ವಿದ್ಯಾರ್ಥಿಗಳು ಐಐಟಿ-ಜೆಇಇ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಐಐಟಿ ಅಡ್ವಾನ್ಸ್ ಪರೀಕ್ಷೆಗೆ ಆಯ್ಕೆಗೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಲಯನ್ಸ್ ಸಂಸ್ಥೆ ಅಧ್ಯಕ್ಷ ಚಿಕ್ಕಬ ಸವಯ್ಯ, ಕಾರ್ಯದರ್ಶಿ ವೆಂಕಟೇಶ್, ಆಡಳಿತ ಮಂಡಳಿ ಸದಸ್ಯರು ಚನ್ನಮಾದೇಗೌಡ, ಜಿಎಸ್‌ಎಂ ಪ್ರಸಾದ್, ರಾಮಯ್ಯ, ಪ್ರಾಂಶುಪಾಲೆ ಧನಲಕ್ಷ್ಮೀ, ಸ್ಯಾಮ್ ಕುಮಾರ್ ಇದ್ದರು.