ಕಡಬ ಕಸಾಪದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

New Project (17)
Published on

ಕಡಬ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕ ಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ವತಿಯಿಂದ ಅಭಿನಂದನಾ ಕಾರ್ಯಕ್ರಮ ಶ್ರೀ ರಾಮಕುಂಜೇಶ್ವರ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಸಾಪ ಕಡಬ ತಾಲೂಕು ಘಟಕ ಅಧ್ಯಕ್ಷ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸುಬ್ರಮಣ್ಯ ಮಠ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಮುಖ್ಯ ಅತಿಥಿಯಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಗೌರವ ಕಾರ್ಯದರ್ಶಿಗಳಾದ ಎನ್.ಕೆ.ನಾಗರಾಜ್, ಡಿ.ವಸಂತಕುಮಾರ್, ಗೌರವ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ, ಸದಸ್ಯರಾದ ರಮೇಶ್ ಕೋಟೆ, ಕಸಾಪ ಕಡಬ ಘಟಕ ಸದಸ್ಯರಾದ ವೆಂಕಟರಮಣ ಭಟ್, ಯಶವಂತ ರೈ, ಎ.ಎನ್.ಕೊಳಂಬೆ ಉಪಸ್ಥಿತರಿದ್ದರು.

ಕಡಬ ತಾಲೂಕಿನ ವಿವಿಧ ಶಾಲೆಗಳ 31 ವಿದ್ಯಾರ್ಥಿಗಳಿಗೆ ಪುಸ್ತಕ ನೀಡಿ ಗೌರವಿಸಲಾಯಿತು. 620ಕ್ಕಿಂತ ಹೆಚ್ಚು ಅಂಕ ಗಳಿಸಿರುವ ತಾಲೂಕಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಡಬ ತಾಪಂ ನಿವೃತ್ತ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ಬಾಲಚಂದ್ರ ಮುಚ್ಚಿಂತಾಯ ಸ್ವಾಗತಿಸಿದರು. ಪ್ರೇಮಾ ಬಿ. ವಂದಿಸಿದರು. ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net