ಮುಖ್ಯಶಿಕ್ಷಕರಿಗೆ ಸನ್ಮಾನ

ಮುಖ್ಯಶಿಕ್ಷಕರಿಗೆ ಸನ್ಮಾನ
Published on

ಸಿದ್ದಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪಾಲಿಬೆಟ್ಟದ ಚೇಶೈರ್ ಹೋಮ್ ಶಾಲೆಯ ಮುಖ್ಯಶಿಕ್ಷಕ ಶಿವರಾಜ್ ಅವರನ್ನು ಸನ್ಮಾನಿಸಲಾಯಿತು.

ಮಡಿಕೇರಿಯ ಓಂಕಾರ ಸದನದಲ್ಲಿ ಮಂಗಳವಾರ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ವಿಮಲಾ, ದೀಪಶ್ರೀ, ಮಹೇಶ್ವರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net