

ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ನಲ್ಲೂರು ವಿವಿಧೋದ್ದೇಶ ಗ್ರಾಮೀಣ ಕೃಷಿ ಸಹಕಾರಿ ಸಂಘವನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಿದ್ದು, ಸಂಘದಲ್ಲಿ ರೈತರಿಗೆ ಕೆಸಿಸಿ ಬೆಳೆ ಸಾಲ, ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ, ರಾಸಾಯನಿಕ ಗೊಬ್ಬರ, ಪಶು ಆಹಾರ, ಪಡಿತರ ಚೀಟಿದಾರರಿಗೆ ಪಡಿತರ ಸೌಲಭ್ಯ ದೊರಕಿಸಿಕೊಡಲಾಗಿದೆ ಎಂದು ಸಂಘದ ಅಧ್ಯಕ್ಷ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀನಾರಾಯಣ್ ತಿಳಿಸಿದರು.
ಹೋಬಳಿಯ ನಲ್ಲೂರಿನ ಸಹಕಾರಿ ಸಂಘದ ಆಡಳಿತ ಮಂಡಳಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಹಕಾರಿ ಸಂಘದ ಎಲ್ಲರ ಸಹಕಾರದಿಂದ 40 ವರ್ಷಗಳಿಂದ ನಿರ್ದೇಶಕರಾಗಿ, ತಾಪಂ, ಜಿಪಂ ಸದಸ್ಯರಾಗಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಪ್ರಶಸ್ತಿ ಲಭಿಸಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ ಎಂದರು.
ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಜಗನ್ನಾಥ್, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್ ಮಾತನಾಡಿದರು.
ನಲ್ಲೂರು ಗ್ರಾಪಂ ಅಧ್ಯಕ್ಷ ಗಂಗಾಧರಮೂರ್ತಿ, ಬೆಟ್ಟಕೋಟೆ ಗ್ರಾಪಂ ಅಧ್ಯಕ್ಷ ಲೋಕೇಶ್ ಗಾಂಧಿ, ಸಂಘದ ಉಪಾಧ್ಯಕ್ಷ ಸುಬ್ರಮಣಿ, ನಿರ್ದೇಶಕರಾದ ಆನಂದ್, ವಿಶ್ವನಾಥ್, ಲಲಿತೇಶ್, ಯಶೋದ್ ರೆಡ್ಡಿ, ಕೃಷ್ಣಪ್ಪ, ಚಂದ್ರಪ್ಪ, ಪಿಳ್ಳಯ್ಯ, ಭಾಗ್ಯಮ್ಮ, ಕಾರ್ಯನಿರ್ವಹಣಾಧಿಕಾರಿ ವರದರಾಜ್, ಕ್ಯಾಶಿಯರ್ ಸಂತೋಷ್, ಭಟ್ಟರ ಮಾರನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಕೆ.ಎಂ. ಗೌಡ, ಮುಖಂಡರಾದ ಮಂಜುನಾಥ್, ಮುನೇಗೌಡ, ವೆಂಕಟೇಶ್ ಇತರರು ಹಾಜರಿದ್ದರು.