

ಕಡಬ: ಗ್ರಾಮೀಣ ಭಾಗದ ವಿದ್ಯಾರ್ಥಿನಿ ಶ್ರೀವಿದ್ಯಾ 1ನೇ ತರಗತಿಯಿಂದ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತ ಇದೀಗ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿರುವುದು ಗ್ರಾಮೀಣ ಪ್ರದೇಶದ ಸರ್ಕಾರಿ ಕಾಲೇಜಿಗೆ ಕೀರ್ತಿ ತಂದಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಹೇಳಿದರು.
ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದ ಕಾಣಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರೀವಿದ್ಯಾ ಅವರಿಗೆ ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ, ವಿದ್ಯಾಭಿಮಾನಿ ಸಂಘಗಳ ವತಿಯಿಂದ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೆಂಕಟೇಶ್ ಭಟ್ ಕೊಯಕ್ಕುಡೆ ಶುಭಹಾರೈಸಿದರು. ಶ್ರೀವಿದ್ಯಾ ಅವರ ತಂದೆ ನಾರಾಯಣ್ ಭಟ್ ಕಾಣಿಯೂರು ತಾಯಿ ಶೈಲಶ್ರೀ, ಸಿಡಿಸಿ ಸದಸ್ಯರಾದ ಶೀನಪ್ಪ ಗೌಡ ಬೈತಡ್ಕ, ಸೀತಾರಾಮ ಗೌಡ ಮುಂಡಾಳ, ಸತೀಶ್ ಮಾರ್ಕಜೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಶಂಕರ ಭಟ್ ಪಿ. ಸ್ವಾಗತಿಸಿದರು.