ಕನ್ನಡಕ್ಕೆ ಸೇವೆ ಸಲ್ಲಿಸುವುದು ಹೆಮ್ಮೆಯ ವಿಷಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಹೇಳಿಕೆ

Honors reception ceremony Mandya
Published on

ಮಂಡ್ಯ: ಕನ್ನಡಕ್ಕೆ ಸೇವೆ ಸಲ್ಲಿಸುವುದು ಹೆಮ್ಮೆಯ ವಿಷಯ ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಕನ್ನಡ ಸೇನೆ ಸಂಘಟನೆಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿರುವ ಅವರು, ಸುದೀರ್ಘ ವರ್ಷದಿಂದ ಕನ್ನಡ ಸೇನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಇಂದು ನನ್ನನ್ನು 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ. ಕನ್ನಡ ಪ್ರೇಮಿಗಳು, ಕನ್ನಡದ ಹೋರಾಟಗಾರರು ದಿನನಿತ್ಯ ಬಂದು ಅಭಿನಂದಿಸುತ್ತಿರುವುದು ನನಗೆ ತುಂಬಾ ಸಂತೋಷವೆನಿಸಿದೆ. ಕನ್ನಡ ನಾಡು ನುಡಿಯ ಸೇವೆಯಲ್ಲಿ ಮಾಡಲು ನನಗೆ ಚಿಕ್ಕ ವಯಸ್ಸಾಗಿದ್ದರೆ ಇನ್ನೂ ಖುಷಿ ಅನಿಸುತ್ತಿತ್ತು ಎಂದರು.

ಕನ್ನಡ ಸೇನೆ ರಾಜ್ಯಾಧ್ಯಕ್ಷ ಕುಮಾರ್ ಮಾತನಾಡಿ, ಗೊ.ರು.ಚನ್ನಬಸಪ್ಪ ಅವರನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿರುವುದು ಕನ್ನಡ ನಾಡಿನ ಹೆಮ್ಮೆಯ ವಿಷಯ. ಐದು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಣ ತಜ್ಞರಾಗಿ, ಕನ್ನಡದ ಪ್ರೇಮಿ, ಸಾಹಿತಿ, ವಚನಕಾರರಾಗಿ ನಿರಂತರವಾಗಿ ನಾಡಿನ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ನಾವೆಲ್ಲರೂ ಸೇರಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಜಿಲ್ಲಾಧ್ಯಕ್ಷರು ಎಚ್.ಸಿ.ಮಂಜುನಾಥ್ ಮಾತನಾಡಿ, ಅತಿ ಹೆಚ್ಚು ಕನ್ನಡ ಮಾತನಾಡುವ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ಉಳಿಸಬೇಕಾಗಿದೆ. ಈಗಾಗಲೇ 300ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿರುವಂತದ್ದು ಬೇಸರ ತಂದಿದೆ. ಕನ್ನಡ ಭಾಷೆ ಅವಲಂಬಿತ ಜಿಲ್ಲೆಗಳಲ್ಲಿ ಇಂತಹ ಸ್ಥಿತಿಯಾದರೆ ಗಡಿ ಭಾಗದ ಜಿಲ್ಲೆಗಳ ಗತಿ ಏನು?. ಸರ್ಕಾರಿ ಶಾಲೆ ಉಳಿವಿಗಾಗಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಾರ್ಯಾಧ್ಯಕ್ಷ ಎಂಎಸ್,ಮಂಜುನಾಥ್, ರಾಜ್ಯ ಸಂಚಾಲಕ ಎಲ್.ಎನ್.ಗೌಡ, ಸಂಘಟನಾ ಕಾರ್ಯದರ್ಶಿ ಅಂಬರೀಷ್‌ಗೌಡ, ಮಹಾಂತಪ್ಪ, ವೇಣುಗೋಪಾಲ್, ಪ್ರದೀಪ್, ದರ್ಶನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net