9ರಂದು ಬಿಎಸ್‌ವೈ, ಬಿವೈಆರ್‌ಗೆ ಸನ್ಮಾನ

k.c.Nataraj Bhagavat
ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್
Published on

ಶಿವಮೊಗ್ಗ: ವಿಪ್ರ ಸ್ನೇಹ ಬಳಗದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನ ಸಮಾರಂಭವನ್ನು ಮಾ.9ರಂದು ಸಂಜೆ 6.30ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಈ ಜಿಲ್ಲೆಯ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರ‌್ನಹಳ್ಳಿ, ಶಾಸಕ ಎಸ್.ಎನ್.ಚನ್ನಬಸಪ್ಪ, ಶಿಕ್ಷಣ ತಜ್ಞ ಎ.ಜೆ. ರಾಮಚಂದ್ರ ಮುಂತಾದವರು ಉಪಸ್ಥಿತರಿರುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶ್ರೀನಾಥ್ ನಗರಗದ್ದೆ, ಎಂ.ಶಂಕರ್, ವೆಂಕಟೇಶರಾವ್, ಸುಬ್ರಹ್ಮಣ್ಯ ಭಟ್ಟ, ನಾಗೇಶ್, ಬಿ.ಆರ್.ಮಧುಸೂದನ್, ಸುರೇಖಾ ಮುರಳೀಧರ್, ಎ.ಜೆ. ರಾಮಚಂದ್ರ, ಎಸ್.ಜಿ. ಆನಂದ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net