ಧರ್ಮಸ್ಥಳ ಮೇಳದ ವ್ಯವಸ್ಥಾಪಕ, ಯಜಮಾನರಿಗೆ ಸನ್ಮಾನ

dharma
Published on

ಕೋಟ: ಕೋಟೇಶ್ವರ ಕುದುರೆಕೆರೆಬೆಟ್ಟಿನಲ್ಲಿ ಹಟ್ಟಿಯಂಗಡಿ ಮೇಳ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ನಡೆದ ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಧರ್ಮಸ್ಥಳ ಮೇಳದ ವ್ಯವಸ್ಥಾಪಕರಾದ ಬಿ.ಎನ್.ಗಿರೀಶ್ ಹೆಗ್ಡೆ, ಪುಷ್ಪರಾಜ್ ಶೆಟ್ಟಿ, ಹಟ್ಟಿಯಂಗಡಿ ಮೇಳ ಹಾಗೂ ಮೆಕ್ಕೆಕಟ್ಟು ಮೇಳದ ಯಜಮಾನ ವಕ್ವಾಡಿ ರಂಜೀತ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಹಟ್ಟಿಯಂಗಡಿ ಸಿದ್ಧಿವಿನಾಯಕ ದೇವಸ್ಥಾನ ಆಡಳಿತ ಧರ್ಮದರ್ಶಿ ಬಾಲಚಂದ್ರಭಟ್ ಆಶೀರ್ವಚನಗೈದರು. ಕೋಟಿಲಿಂಗೇಶ್ವರ ದೇವಸ್ಥಾನ ಮಾಜಿ ಧರ್ಮದರ್ಶಿ ಗೋಪಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾವ್ಯಶ್ರೀ, ವಾಸ್ತುತಜ್ಞ ಡಾ.ಬಸವರಾಜ್ ಶೆಟ್ಟಿಗಾರ್, ಉದ್ಯಮಿ ಸುಭಾಶ್ ಶೆಟ್ಟಿ, ಹಂಗಳೂರು ಶನೀಶ್ವರ ದೇವಸ್ಥಾನ ಧರ್ಮದರ್ಶಿ ಅಣ್ಣಯ್ಯ ಪೂಜಾರಿ ಉಪಸ್ಥಿತರಿದ್ದರು.

ಚಂದ್ರಶೇಖರ್ ಪದ್ಮಶಾಲಿ ಕಾರ್ಯಕ್ರಮ ನಿರೂಪಿಸಿದರು. ಬಸವರಾಜ್ ಶೆಟ್ಟಿಗಾರ್ ಸ್ವಾಗತಿಸಿದರು. ಲೋಕೇಶ್ ಕುಮಾರ್ ಅತಿಥಿಗಳನ್ನು ಗೌರವಿಸಿದರು. ಗುರುರಾಜ್ ಶಾಂತಾಪುರ ವಂದಿಸಿದರು. ವಾಸ್ತುತಜ್ಞ ಡಾ.ಬಸವರಾಜ್ ಶೆಟ್ಟಿಗಾರ್ ವಿರಚಿತ ಹಟ್ಟಿಯಂಗಡಿ ಕ್ಷೇತ್ರ ಮಹಾತ್ಮೆ ಮತ್ತು ಕಪಿಲೇಶ್ವರ ಮಹಾತ್ಮೆ ಅವಳಿ ಪ್ರಸಂಗ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net