ಶಾಸಕ ಮಂತರ್‌ಗೌಡಗೆ ಸನ್ಮಾನ

Oplus_131072
ಸೋಮವಾರಪೇಟೆ ಶಾಸಕರ ಕಚೇರಿಯಲ್ಲಿ ಡಾ.ಮಂತರ್‌ಗೌಡ ಅವರನ್ನು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳು ಸನ್ಮಾನಿಸಿದರು. ಅರುಣ್, ದೀಪಕ್, ಆದರ್ಶ ಇದ್ದರು.
Published on

ಸೋಮವಾರಪೇಟೆ: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಡಿಕೇರಿಯಿಂದ ಸೋಮವಾರಪೇಟೆ ಮಾರ್ಗವಾಗಿ ಸಕಲೇಶಪುರದ ದೋಣಿಗಾಲ್‌ಗೆ ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿರುವುದಕ್ಕೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು.

ಶಾಸಕರ ಕಚೇರಿಯಲ್ಲಿ ಸಮಿತಿ ಅಧ್ಯಕ್ಷ ಅರುಣ್ ಕಾಳಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಎನ್.ದೀಪಕ್, ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಖಜಾಂಚಿ ತ್ರಿಶೂಲ್, ಜೀವನ್, ಹೂವಯ್ಯ ಮಾಸ್ಟರ್, ಜಯರಾಂ, ಉದಯ, ಅನಂತ್, ಮಂಜುನಾಥ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net