ಉಮಾಮಹೇಶ್ವರ ಕ್ಷೇತ್ರದಲ್ಲಿ ಚಂಡಿಕಾ ಹೋಮ

17Kush04
Published on

ಕುಶಾಲನಗರ : ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರಿನ ಶ್ರೀ ಉಮಾಮಹೇಶ್ವರ ಕ್ಷೇತ್ರದ ಮಹಾದೇವಿ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಮಂಗಳವಾರ ಮೃತ್ಯುಂಜಯ ಹೋಮ ಮತ್ತು ಚಂಡಿಕಾ ಹೋಮ ನೆರವೇರಿತು.
ಬೆಳಗಿನಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳು ನಡೆವು. ನಂತರ ಋತ್ವಿಜರಾದ ಕೇರಳದ ಸಜಿ ಪಣಿಕ್ಕರ್, ಶ್ರೀನಿಧಿ, ಹರಿ ತಂಡದವರು ಹೋಮ ಮತ್ತು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು. ಪೂಜಾ ಕಾರ್ಯದಲ್ಲಿ ಕುಶಾಲನಗರ, ಹಾರಂಗಿ ಕೂಡಿಗೆ, ಮದಲಾಪುರ ಹುದುಗೂರು, ಯಡವನಾಡು, ಸೇರಿದಂತೆ ಸುತ್ತಮುತ್ತಲಿನ ಭಕ್ತರು ಭಾಗವಹಿಸಿದ್ದರು. ದೇವಾಲಯ ಸಮಿತಿಯಿಂದ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ.ಚಾಮಿ, ಉಪಾಧ್ಯಕ್ಷ ಮುತ್ತಪ್ಪ, ಕಾರ್ಯದರ್ಶಿ ಬಿ.ಎಲ್.ಸುರೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net