ಹಿರೇಹಡಗಲಿಯ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನದ ಗೋಪುರದ ಕಲಶ ಧ್ವಂಸ ಮಾಡಿದ ದುಷ್ಕರ್ಮಿಗಳು

31102021 Hadagali Temple
Published on


ಹೂವಿನಹಡಗಲಿ: ತಾಲೂಕಿನ ಹಿರೇಹಡಗಲಿಯ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನದ ಗೋಪುರದ ಕಲಶವನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ. ನಿಧಿ ಆಸೆಗಾಗಿ ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಭಾನುವಾರ ಬೆಳಗಿನ ಜಾವ ವಾಯುವಿಹಾರಕ್ಕೆಂದು ತೆರಳಿದ್ದ ಜನರು, ಕಲಶ ಕೆಳಗೆ ಬಿದ್ದಿರುವುದನ್ನು ನೋಡಿ, ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ. ಕೂಡಲೇ ಪಿಎಸ್‌ಐ ದಾದಾವಲಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಗ್ರಹ: ದೇವಸ್ಥಾನದ ಗೋಪುರ ಕಲಶ ಧ್ವಂಸ ಮಾಡಿರುವುದು ಖಂಡನೀಯ. ದುಷ್ಕರ್ಮಿಗಳು ಯಾರೇ ಆಗಿರಲಿ ತಕ್ಷಣವೇ ಬಂಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತಾಲೂಕು ಕೇಂದ್ರ ಹೂವಿನಹಡಗಲಿ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಹಾಲಸ್ವಾಮಿ ಮಠದ ಅಭಿನವ ಹಾಲಸ್ವಾಮೀಜಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net