ಹಂತ ಹಂತವಾಗಿ ಅಭಿವೃದ್ಧಿ ಕೆಲಸ; ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮಾಹಿತಿ

06012023 Hadagali ptp news
Published on

ಹೂವಿನಹಡಗಲಿ: ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.

ಪಟ್ಟಣದ ಬಡಾವಣೆಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ನಗರೋತ್ತಾನ ಯೋಜನೆಯಡಿ ಅಂದಾಜು 4.05 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಜಿಪಂನ ಕೆಕೆಆರ್‌ಡಿಬಿ ಅನುದಾನದಡಿ ಅಂದಾಜು 53 ಲಕ್ಷ ರೂ. ವೆಚ್ಚದಲ್ಲಿ ಚರಂಡಿ ಕಾಮಗಾರಿ ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುವುದು ಎಂದರು.

ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್ ಎಚ್., ಸದಸ್ಯರಾದ ಸೊಪ್ಪಿನ ಮಂಜುನಾಥ್, ರಫಿ, ದುರುಗಮ್ಮ ಜೆ., ಯುತ್ ಕಾಂಗ್ರೆಸ್ ಅಧ್ಯಕ್ಷ ವಾರದ ಸಿಕಂದರ್, ಉಪಾಧ್ಯಾಕ್ಷ ದೇಸಾಯಿ ಮಂಜುನಾಥ್, ಮಾಜಿ ಪುರಸಭಾ ಸದಸ್ಯ ಹಂಪಸಾಗರ ಖಾಜಾ, ಕಾಂಗ್ರೆಸ್ ಮುಖಂಡರಾದ ಚಂದ್ರನಾಯ್ಕ, ಜಿ.ವಸಂತ, ಗಿರೀಶ್ ಹುಚ್ಚಿಕಾಯಿ, ಶರತ್ ಐಗೋಳ್, ಅಟವಾಳಗಿ ಕೊಟ್ರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net