ಪ್ರಜಾಪ್ರಭುತ್ವದ ಆಶಯಗಳು ನಾಶ: ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಶಿವಣ್ಣ ಟೀಕೆ

Published on

ಮೈಸೂರು: ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ನಾಶಗೊಳಿಸುತ್ತಿರುವ ಬಿಜೆಪಿ ವಿರುದ್ಧ ಹೋರಾಟ ಮಾಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ಕಾರ್ಯಾಧ್ಯಕ್ಷ ಬಿ.ಶಿವಣ್ಣ ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಪ್ರಗತಿಗೆ ಯಾವುದೇ ಕೆಲಸಗಳನ್ನು ಮಾಡಿಲ್ಲ. ಕೇವಲ ಬಂಡವಾಳಶಾಹಿಗಳ ಗುಲಾಮರಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಒಕ್ಕೂಟದ ರಾಜ್ಯ ಸಂಚಾಲಕ ಕೃಷ್ಣಪ್ಪ, ನಂಜನಗೂಡು ತಾಲೂಕು ಅಧ್ಯಕ್ಷ ಆರ್.ಮಹದೇವ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ, ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರವೀಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net