ಮೈಸೂರು-ಬೆಂಗಳೂರು ದಶಪಥದಲ್ಲಿ ಭೀಕರ ಅಪಘಾತ; ಒಬ್ಬನ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ..

Ramanagar Accident
Published on

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸಾವಿಗೀಡಾಗಿದ್ದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ.

ತೆಂಗಿನಕಾಯಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಹಾಗೂ ಬೊಲೆರೋ ಸರಕು ಸಾಗಣಿಕೆ ವಾಹನಗಳ ಮಧ್ಯೆ ಡಿಕ್ಕಿಯಾಗಿ ಈ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲಕ ಚಾಲಕ ಸಾವಿಗೀಡಾಗಿದ್ದಾನೆ.

ಬೊಲೆರೋ ಸರಕು ಸಾಗಣಿಕೆ ವಾಹನದ ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಚಾಲಕನ ಶವವನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net