ಕ್ರೀಡೆ ತರಲಿದೆ ಆರೋಗ್ಯ ಭಾಗ್ಯ

hsd dahika shiksakara sammelana 29 p2
Published on

ಹೊಸದುರ್ಗ: ಮಕ್ಕಳು ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ಭಾಗ್ಯದ ಜತೆ ಸರ್ವತೋಮುಖ ಬೆಳವಣಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.

ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಪಟ್ಟಣದ ರಾಧಾಕೃಷ್ಣ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಡಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಹುಡುಕಿ ಅನಾವರಣಗೊಳಿಸುವ ಕೆಲಸ ಹೆಚ್ಚಾಗಿ ನಡೆಯಬೇಕು. ಇದರಿಂದ ದೇಶಕ್ಕೆ ಉತ್ತಮ ಕ್ರೀಡಾಪಟುಗಳು ದೊರೆಯುವ ಮೂಲಕ ಜಾಗತೀಕ ಮಟ್ಟದಲ್ಲಿ ದೇಶದ ಕಿರ್ತಿ ಹೆಚ್ಚಾಗುತ್ತದೆ ಎಂದರು.

ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ಮಾತನಾಡಿ, ದೈಹಿಕ ಶಿಕ್ಷಣದ ಮೂಲಕ ಮಕ್ಕಳಿಗೆ ಶಿಸ್ತು ಕಲಿಸಲು ಸಾಧ್ಯ ಎಂದು ತಿಳಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಲ್.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ಎನ್.ಟಿ.ದಿವಾಕರ್, ಕಾರ್ಯದರ್ಶಿ ವೈ.ರವಿಕುಮಾರ್, ಜಿ.ರಂಗಪ್ಪ, ಬಿ.ಬಸವರಾಜಪ್ಪ, ಸತ್ಯನಾರಾಯಣ, ಟಿ.ಲೋಕೇಶ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net