ಬಿಎಸ್‌ವೈ ಬೆಂಬಲಕ್ಕೆ ನಿಂತ ಮಠಾಧೀಶರು

CTD HSD CM 17 p2
Published on

ಹೊಸದುರ್ಗ: ಬೆಂಗಳೂರಿನ ಸದಾಶಿವ ನಗರದಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ವಿವಿಧ ಗುರುಪೀಠಗಳ ಮಠಾಧೀಶರು, ಬಿ.ಎಸ್.ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿತು.

ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣಯಾದವಾನಂದ ಸ್ವಾಮೀಜಿ ನಿಯೋಗದಲ್ಲಿ ಇದ್ದರು.

ಯಡಿಯೂರಪ್ಪ ಅವರೊಂದಿಗೆ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಮಠಾಧೀಶರು, ಯಾವುದೇ ಘಟನೆಗಳಿಂದ ವಿಚಲಿತರಾಗಬಾರದು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದರು.

ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ರಾಜ್ಯದ ಇತಿಹಾಸದಲ್ಲಿ ಮಠಗಳಿಗೆ, ಸಂಘ ಸಂಸ್ಥೆಗಳಿಗೆ ಬೆನ್ನೆಲುಬಾಗಿ ನಿಂತ ಮೊದಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು. ಯಾವುದೇ ವಿದ್ಯಮಾನಗಳಿಗೆ ಬೇಸರ ಮಾಡಿಕೊಳ್ಳಬಾರದು. ನೈತಿಕವಾಗಿ ನಾವೆಲ್ಲರೂ ಅವರ ಬೆನ್ನಿಗಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net