ರಕ್ತದಾನದಿಂದ ಜೀವ ರಕ್ಷೆ

HSD raktadana shibera 23 file-1
Published on

ಹೊಸದುರ್ಗ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಚಿತ್ರದುರ್ಗ ರಕ್ತ ಬ್ಯಾಂಕ್ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 63 ಜನ ರಕ್ತದಾನ ಮಾಡಿದರು.

ಲಾಕ್‌ಡೌನ್‌ನಿಂದ ರಕ್ತದಾನ ಶಿಬಿರಗಳು ನಡೆಯದ ಕಾರಣ ಜಿಲ್ಲಾ ರಕ್ತನಿಧಿ ಕೇಂದ್ರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ. ಈ ಕಾರಣಕ್ಕೆ ಶಿಬಿರ ಆಯೋಜಿಸಲಾಗಿದೆ ಎಂದು ಸಿಬ್ಬಂದಿ ತಿಳಿಸಿದರು.

ಪುರಸಭೆ ಸದಸ್ಯ ಮಂಜುನಾಥ್, ತಾಲೂಕು ಕ್ರೀಡಾಧಿಕಾರಿ ದಿವಾಕರ್, ಕರವೇ ಅಧ್ಯಕ್ಷ ಲೋಕೇಶ್ ಮತ್ತಿತರರು ರಕ್ತದಾನ ಮಾಡಿದರು.

ಟಿಎಚ್‌ಒ ಡಾ.ಚಂದ್ರಶೇಖರ್ ಕಂಬಾಳಿ ಮಠ ಮಾತನಾಡಿ, ಆರೋಗ್ಯ ಇಲಾಖೆ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ರಕ್ತದಾನದ ಮೂಲಕ ರೋಗಿಗಳ ಕಷ್ಟಕ್ಕೆ ಸ್ಪಂದಿಸುವ ಗುಣ ದೊಡ್ಡದು. ತಾಲೂಕಿನ ಶ್ರೀರಾಂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಮೇ 3ರಂದು ಶಿಬಿರ ಆಯೋಜಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net