ಮಕ್ಕಳ ಮನಸ್ಸಿನಲ್ಲಿ ಪರಿಸರ ಜಾಗೃತಿ ಬೀಜ

HSD bagiratha gurupeeta 05 file-2
Published on

ಹೊಸದುರ್ಗ: ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಕುರಿತು ಜಾಗೃತಿ ಮೂಡಿಸುವುದು ಉತ್ತಮ ಎಂದು ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.

ಭಗೀರಥ ಮಠದ ಆವರಣದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ನಾಶದಿಂದ ಮನುಷ್ಯ ಸಂಕುಲ ಅಪಾಯಕ್ಕೆ ಸಿಲುಕಿದೆ. ದಿನದಿಂದ ದಿನಕ್ಕೆ ಆರೋಗ್ಯದ ಮೇಲೆ ಮಾರಕ ಪರಿಣಾಮವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ಸಹಾಯಕ ನಿರ್ದೇಶಕ ಸಿ.ಎಸ್.ಈಶ್ವರ್ ಮಾತನಾಡಿದರು. ಸಾಮಾಜಿಕ ವಲಯ ಅರಣ್ಯಾಧಿಕಾರಿ ಮೇಘನಾ, ಗ್ರಾಪಂ ಮಾಜಿ ಅಧ್ಯಕ್ಷ ನಟರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net