15 ಮಂದಿ ವರದಿ ನೆಗೆಟಿವ್

Covid hosptail
Published on

ಹೊಸದುರ್ಗ: ತಾಲೂಕಿನ ಜಾನಕಲ್ಲು ನಾಯಕರಹಟ್ಟಿಯ 15 ಜನರ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಾನಕಲ್ಲು ನಾಯಕರಹಟ್ಟಿ ಮೂಲದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಬೆಂಗಳೂರಿನಲ್ಲಿ ಕರೊನಾ ಸೋಂಕು ತಗುಲಿದ್ದು, ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿತ್ತು. 15 ಜನರ ಗಂಟಲು ದ್ರವ ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 15 ಜನರ ವರದಿ ನೆಗೆಟಿವ್ ಬಂದಿದ್ದು ಜನರು ಯಾವುದೇ ಆಂತಕ ಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿ ಮಠ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net