ಪರಿಷತ್‌ನಲ್ಲಿ ಬಿಜೆಪಿ ಗೆಲುವಿನ ಅಭಿಯಾನ

hsd bjp sabe 13 p1
Published on

ಹೊಸದುರ್ಗ: ಈ ಹಿಂದಿನಂತೆ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಅಭಿಯಾನ ಮುಂದುವರಿಯಲಿದೆ ಎಂದು ಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ತಿಳಿಸಿದರು.

ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಕ್ಷದ ಕಾರ್ಯಕರ್ತರು ಹೋರಾಟ ನಡೆಸಲಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳ ಸಾಧನೆಗಳು ನಮಗೆ ವರದಾನವಾಗಲಿವೆ ಎಂದರು.

ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ಚಿದಾನಂದಗೌಡ ಮಾತನಾಡಿ, ಸಮಾಜ ಸೇವೆ ಮಾಡುವ ಆಶಯ ಹೊಂದಿದ್ದೇನೆ. ಪದವೀಧರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಹೋರಾಟ ನಡೆಸುವೆ ಎಂದರು.

ಬಿಜೆಪಿ ಮುಖಂಡರಾದ ದಾಳಿಂಬೆ ಈಶ್ವರಪ್ಪ, ದೊಡ್ಡಯ್ಯ, ಎನ್.ಆರ್.ಜಗದೀಶ್, ಜಿಲ್ಲಾ ಉಪಾಧ್ಯಕ್ಷೆ ಪಾರ್ವತಮ್ಮ, ಡಿ.ಆರ್.ನಾಗೇಶಪ್ಪ, ತುಂಬಿನಕೆರೆ ಬಸವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net