ಗೂಳಿಹಟ್ಟಿಗೆ ಸಿಗಲಿ ಸ್ಥಾನಮಾನ

GOOLIHATTI SHEKAR
Published on

ಹೊಸದುರ್ಗ: ಶಾಸಕ ಗೂಳಿಹಟ್ಟಿ ಡಿ.ಶೇಖರ್‌ಗೆ ಸರ್ಕಾರದಲ್ಲಿ ಸ್ಥಾನಮಾನ ನೀಡುವಂತೆ ಭಗೀರಥ ಶ್ರೀ ಒತ್ತಾಯಿಸಿದರು. ಪೀಠದ ಅಭಿವೃದ್ಧಿಗೆ 10 ಕೋಟಿ ಅನುದಾನದ ಭರವಸೆ ನೀಡಿದ ಶಾಸಕರನ್ನು ಅಭಿನಂದಿಸಿದರು.

ತಾಲೂಕಿನ ಬಿ.ವಿ.ನಗರದ ಭಗೀರಥ ಗುರುಪೀಠದಲ್ಲಿ ಸೋಮವಾರ ಆಯೋಜಿಸಿದ್ದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ 21ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಶ್ರೀಗಳ ಪ್ರಯತ್ನದಿಂದ ಸಮುದಾ ಅಭಿವೃದ್ಧಿಯತ್ತ ಮುಖ ಮಾಡಿದೆ ಎಂದರು.

ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ,ಶ್ರೀ ಕೃಷ್ಣಯಾದವಾನಂದ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮ ಸ್ವಾಮೀಜಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಉಪ್ಪಾರ ಸಮಾಜದ ಅಧ್ಯಕ್ಷ ಕೊಂಡಾಪುರ ಮಂಜುನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net