ಶಿವಶರಣರ ಜೀವನ ಮಾದರಿ

HSD BASAVA 29
Published on

ಹೊಸದುರ್ಗ: ಹನ್ನೆರಡನೇ ಶತಮಾನದ ಶರಣರ ಬದುಕಿನ ಮೌಲ್ಯ ಅಳವಡಿಸಿಕೊಳ್ಳುವುದೆ ಬಸವಣ್ಣನಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹೇಳಿದರು.

ಇಲ್ಲಿನ ಒಪ್ಪತ್ತಿನಸ್ವಾಮಿ ವಿರಕ್ತಮಠದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬಸವ ಜಯಂತ್ಯುತ್ಸವದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅನುಭವ ಮಂಟಪದ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪರಿಚಯಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ ಎಂದರು.

ತುಳಿತಕ್ಕೊಳಗಾದ ಸಮುದಾಯಗಳಿಗೆ ಧ್ವನಿಯಾಗುವ ಮೂಲಕ ಸಮಾನತೆ ಸಾರಿದರು. ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ರೂಪಿಸುವ ಮೂಲಕ ಕ್ರಾಂತಿಗೆ ಕಾರಣವಾದರು. ಅವರು ಮಾಡಿದ ಸಮಾಜಮುಖಿ ಕಾರ್ಯಗಳಿಂದ 800 ವರ್ಷಗಳ ನಂತರವೂ ಪ್ರಸ್ತುತವಾಗಿದ್ದಾರೆ ಎಂದು ತಿಳಿಸಿದರು.

ಪುರಸಭೆ ಸದಸ್ಯರಾದ ಮಂಜುನಾಥ್, ಶ್ರೀನಿವಾಸ್, ಕೆ.ಎಸ್.ಕಲ್ಮಠ್, ನಿಜಲಿಂಗಪ್ಪ, ಬಿಇಒ ಎಲ್.ಜಯಪ್ಪ, ಅಶೋಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net