ವಿಶ್ವಗುರು ಸ್ಥಾನದತ್ತ ಭಾರತ

HSD ABIYANA 14 (1)
Published on

ಹೊಸದುರ್ಗ: ನರೇಂದ್ರ ಮೋದಿ ಸಮರ್ಥ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಜಾನಕಲ್ಲು ಗ್ರಾಮದಲ್ಲಿ ಭಾನುವಾರ ಬಿಜೆಪಿ ಆಯೋಜಿಸಿದ್ದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿಶ್ವಕ್ಕೆ ಮಾರಕವಾಗಿರುವ ಕರೊನಾ ರೋಗವನ್ನು ಸಮರ್ಥವಾಗಿ ತಡೆಗಟ್ಟುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದ್ದಾರೆ. ಪ್ರಪಂಚವೇ ಭಾರತದ ನಾಯಕತ್ವವನ್ನು ಒಪ್ಪಿಕೊಳ್ಳುವಂತ ಸ್ಥಿತಿ ನಿರ್ಮಾಣವಾಗಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಬಿಜೆಪಿ ತಾಲೂಕಾದ್ಯಕ್ಷ ಗೂಳಿಹಟ್ಟಿ ಜಗದೀಶ್ ಮಾತನಾಡಿ, ಪಕ್ಷದ ಕಾರ್ಯಕರ್ತರು ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಸರ್ಕಾರದ ಸಾಧನೆಯನ್ನು ಜನತೆ ತಿಳಿಸಬೇಕು ಎಂದರು.

ಬಿಜೆಪಿ ಕಾರ್ಯದರ್ಶಿ ದೊಡ್ಡಯ್ಯ, ಎನ್.ಆರ್.ಜಗದೀಶ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net