ಸುಮಿತ್ರಾ ಹೊಸದುರ್ಗ ತಾಪಂ ಅಧ್ಯಕ್ಷೆ

SUMITRA MANJUNATH TP MEMBER HSD
Published on

ಹೊಸದುರ್ಗ: ತಾಪಂ ಅಧ್ಯಕ್ಷೆಯಾಗಿ ಸಾಣೇಹಳ್ಳಿ ಕ್ಷೇತ್ರದ ಸದಸ್ಯೆ ಸುಮಿತ್ರಾ ಮಂಜುನಾಥ್ ಅವಿರೋಧ ಆಯ್ಕೆಯಾಗಿದ್ದಾರೆ.

ಪ್ರೇಮಾ ರವೀಂದ್ರ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ತಾಪಂ ಸಭಾಂಗಣದಲ್ಲಿ ಚುನಾವಣೆ ನಿಗದಿಯಾಗಿತ್ತು.

ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಘೋಷಿಸಲಾಯಿತು. ಉಪ ವಿಭಾಗಾಧಿಕಾರಿ ಪ್ರಸನ್ನ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ತಹಸೀಲ್ದಾರ್ ತಿಪ್ಪೇಸ್ವಾಮಿ, ಇಒ ಜಾನಕೀರಾಮ್ ಮತ್ತಿತರರಿದ್ದರು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net