ಬೀದಿಗಿಳಿದ ರಾಗಿ ಬೆಳೆಗಾರರು

HSD prathibatane 19 file-3 (1)
Published on

ಹೊಸದುರ್ಗ: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಡಿ ಸ್ಥಾಪಿಸಿರುವ ಬೆಂಬಲ ಬೆಲೆಯ ಕೇಂದ್ರದಲ್ಲಿ ರಾಗಿ ಖರೀದಿ ಸ್ಥಗಿತಗೊಳಿಸಿರುವ ಕ್ರಮ ಖಂಡಿಸಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.

ಎಪಿಎಂಸಿ ಅಧ್ಯಕ್ಷ ಎಚ್.ಸಿ.ಮಲ್ಲಿಕಾರ್ಜುನ್ ಮಾತನಾಡಿ, ಖರೀದಿ ಕೇಂದ್ರದಲ್ಲಿ ಅವ್ಯವಹಾರ ನಡೆಯುತ್ತಿದೆ. ನೈಜ ರೈತರ ಬದಲು ವರ್ತಕರ ರಾಗಿಯನ್ನು ರೈತರ ಹೆಸರಲ್ಲಿ ಖರೀದಿಸಲಾಗುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಗಿ ಖರೀದಿ ಕೇಂದ್ರದಲ್ಲಿ ನಡೆಯುತ್ತಿರುವ ಅವ್ಯವಹಾರಕ್ಕೆ ಬ್ರೇಕ್ ಹಾಕದಿದ್ದರೆ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ, ರಾಜಪ್ಪ, ರಂಗಪ್ಪ, ಬಸವರಾಜು, ಸೋಮಪ್ಪ, ರುದ್ರಪ್ಪ, ಶಶಿ, ಸಿದ್ದರಾಜು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net