ವಿಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್

Published on

ಹೊಸಪೇಟೆ: ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ನಗರ ಸೇರಿದಂತೆ ಜಿಲ್ಲಾದ್ಯಾಂತ ಶ್ರದ್ಧಾ, ಭಕ್ತಿಯಿಂದ ಆಚರಿಸಿದರೆ, ಇನ್ನೂ ಕೆಲ ಕಡೆ ಡಿಜಿ ಸೌಂಡಿಗೆ ಯುವಕರು ಕುಣಿದು ಕುಪ್ಪಳಿಸಿದರು.

ಬೆಳಿಗ್ಗೆ ಮನೆಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಮಸೀದಿಗೆ ಬಂದು ಪುನಃ ನಮಾಜ್ ಮಾಡಿದರು. ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ನಂತರ ನಡೆದ ಮೆರವಣಿಗೆಗೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದಿದ್ದ ನೂರಾರು ಜನ ಸಾಕ್ಷಿಯಾದರು. ಚಿಣ್ಣರಿಂದ ವಯಸ್ಕರ ವರೆಗೆ ಮೆರವಣಿಗೆಯಲ್ಲಿ ಭಾಗವಹಿಸಿ, ಯುವಕರು ಡಿಜೆ ಸೌಂಡಿಗೆ ಮೈಮರೆತು ಹೆಜ್ಜೆ ಹಾಕಿದರು.

ಅರ್ಧ ಚಂದ್ರ ಇರುವ ಹಸಿರು ವರ್ಣದ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು. ಮೆಕ್ಕಾ ಮದೀನಾ, ಜಾಮೀಯಾ ಮಸೀದಿ, ಕುತುಬ್ ಮಿನಾರ್ ಪ್ರತಿಕೃತಿಗಳು ಗಮನ ಸೆಳೆದವು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭಗೊAಡ ಮೆರವಣಿಗೆಯು ಚಿತ್ತವಾಡ್ಗಿ ರಸ್ತೆ, ಶ್ರಮಿಕ ಭವನ, ರಾಮ ಟಾಕೀಸ್, ಮೂರಂಗಡಿ ವೃತ್ತ, ಬಸ್ ನಿಲ್ದಾಣ, ರೋಟರಿ ವೃತ್ತದ ಮೂಲಕ ಹಾದು ಹೋದವು. ಸಾವಿರಾರು ಜನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರಿAದ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಪರದಾಟ ನಡೆಸಿದರು. ಮೆರವಣಿಗೆಯು ಹಾದು ಹೋಗುವಾಗ ಹಿಂದೂ ಧರ್ಮೀಯರು ಬರಮಾಡಿಕೊಂಡು, ಹಬ್ಬದ ಶುಭ ಕೋರಿದರು. ಬಳಿಕ ಪರಸ್ಪರ ಕೈಗಳನ್ನು ಮೇಲಕ್ಕೆತ್ತಿ ಸೌಹಾರ್ದತೆ, ಭಾವೈಕ್ಯತೆ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net