ಶ್ರೀ ಕೃಷ್ಣ ದೇಗುಲದಲ್ಲಿ ಪ್ರಸಾದ ವಿನಿಯೋಗ

hoakote krishna jnamastami
Published on

ಬೆಂಗಳೂರು ಗ್ರಾಮಾಂತರ: ಹಬ್ಬ-ಹರಿದಿನಗಳು ನಮ್ಮ ನಾಡಿನ ಸಂಸ್ಕೃತಿ ಹಾಗೂ ಪರಂಪರೆ ಪ್ರತೀಕವಾಗಿವೆ. ಪ್ರತಿ ಹಬ್ಬಗಳಿಗೂ ಅದರದೇ ಆದ ವಿಶೇಷತೆ ಇರುತ್ತದೆ. ಸಾವಿರಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಇಂಥ ಸಂಪ್ರದಾಯವನ್ನು ನಾವೆಲ್ಲ ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಗರುಡಾಚಾರ್‌ಪಾಳ್ಯದ ರುಕ್ಷ್ಮೀಣಿ, ಸತ್ಯಭಾಮ ಸಮೇತ ಶ್ರೀಕೃಷ್ಣ ದೇಗುಲದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಿ ಮಾತನಾಡಿದರು. ಶಿಷ್ಟರನ್ನು ರಕ್ಷಿಸಿ ದುಷ್ಟರನ್ನು ಶಿಕ್ಷಿಸುವ ಸಲುವಾರಿ ಶ್ರೀಕೃಷ್ಣನ ಅವತಾರದಲ್ಲಿ ಭಗವಂತ ಅವತರಿಸಿದ್ದ ಎಂದರು. ಬಾಲ್ಯದಿಂದಲೂ ಶ್ರೀಕೃಷ್ಣನ ಲೀಲೆಗಳನ್ನು ಮಕ್ಕಳು ಕೇಳುತ್ತಾ ಬೆಳೆಯುತ್ತಾರೆ, ಈ ಹಿನ್ನೆಲೆಯಲ್ಲಿ ಆತನಲ್ಲಿನ ಸದ್ಗುಣ, ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net