ಅಪೌಷ್ಟಿಕತೆ ನಿವಾರಣೆಗೆ ಪಿಎಂ ಪೋಷಣ್ ಶಕ್ತಿ

hosakote phoshan program
Published on

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಮಕ್ಕಳನ್ನು ಹೆಚ್ಚಾಗಿ ಕಾಡುವ ಅಪೌಷ್ಟಿಕತೆ ನಿವಾರಣೆಗೆ ಸರ್ಕಾರ, ಪಿಎಂ ಪೋಷಣ್ ಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ಮೂಲಕ ಅಪೌಷ್ಟಿಕತೆ ನಿವಾರಿಸಿ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಉತ್ತೇಜಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ತಾಲೂಕಿನ ವಾಗಟ ಸರ್ಕಾರಿ ಪ್ರೌಡ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ ಹಾಗೂ ಪಂಚಾಯತ್ ರಾಜ್ ಸಹಯೋಗದಲ್ಲಿ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಗೆ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಜತೆಗೆ ರಾಜ್ಯ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುವುದು. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುವುದು ಎಂದರು.
ಡಿಡಿಪಿಐ ಶ್ರೀಕಂಠ ಮಾತನಾಡಿ, ಮೊಟ್ಟೆ ಹಾಗೂ ಬಾಳೆಹಣ್ಣು ಮಕ್ಕಳ ಆರೋಗ್ಯಕ್ಕೆ ಪೂರಕವಾಗಿದ್ದು, ಇದರಿಂದ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಆರೋಗ್ಯ ವೃದ್ಧಿಸಲಿದೆ ಎಂದರು.
ಶಾಲಾ ಮಕ್ಕಳಿಗೆ ಸಮವಸ್ತ್ರ, ಶೂ ವಿತರಿಸಲಾಯಿತು. ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುನೀಲ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಅಣ್ಣಯ್ಯಪ್ಪ, ವಾಗಟ ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಮೂರ್ತಿ, ಮುಖಂಡರಾದ ನರೇಂದ್ರ, ಸೊಣ್ಣೇಗೌಡ, ಸಂಪಂಗಿ ರಾಮಯ್ಯ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net