ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ: ನದಿ ಪಾತ್ರದಲ್ಲಿ ಜನರು ಓಡಾಡದಂತೆ ಎಚ್ಚರಿಕೆ

14092021 TB Dan Full
Published on

ಹೊಸಪೇಟೆ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಟಿಬಿ ಡ್ಯಾಂಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದೆ. ಕಾರಣ ನದಿ ಪಾತ್ರದಲ್ಲಿ ಜನರು ಓಡಾಡದಂತೆ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಇಂಜಿನಿಯರ್ ವಿಶ್ವನಾಥ್ ತಿಳಿಸಿದ್ದಾರೆ.

ಶಿವಮೊಗ್ಗ, ದಾವಣಗೆರೆ ಸುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. 60 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಈಗಾಗಲೇ ಡ್ಯಾಂ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಯಾವುದೇ ಕ್ಷಣದಲ್ಲಿ ನದಿಗೆ ಹರಿಸುವ ಸಾಧ್ಯತೆ ಇದೆ. ಆರಂಭದಲ್ಲಿ 50 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ನದಿಗೆ ಬಿಡಲಾಗುವುದು. ನದಿ ಪಾತ್ರದಲ್ಲಿ ಜನರು ಜಾನುವಾರುಗಳೊಂದಿಗೆ ತೆರಳಬಾರದು. ತೆಪ್ಪ, ಮೋಟಾರ್ ದೋಣಿಗಳೊಂದಿಗೆ ಸಂಚರಿಸಬಾರದು. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವನಾಥ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net