ಒಬ್ಬ ಶಿಕ್ಷಕಿ, 13 ವಿದ್ಯಾರ್ಥಿಗಳಿಗೆ ಕರೊನಾ

200122 Kamalapura Govt College Sealdown
ಹೊಸಪೇಟೆ ತಾಲೂಕಿನ ಕಮಲಾಪುರದ ಸರ್ಕಾರಿ ಪಪೂ ಕಾಲೇಜಿನ ಪ್ರೌಢ ಶಾಲಾ ವಿಭಾಗವನ್ನು ಸೀಲ್‌ಡೌನ್ ಮಾಡಿರುವುದು.
Published on

ಹೊಸಪೇಟೆ: ತಾಲೂಕಿನ ಕಮಲಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ)ದ ಒಬ್ಬ ಶಿಕ್ಷಕಿ, 13 ವಿದ್ಯಾರ್ಥಿಗಲ್ಲಿ ಕರೊನಾ ಇರುವುದು ದೃಢಪಟ್ಟಿದೆ. ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 47 ಜನರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 14 ಜನರ ವರದಿ ಪಾಸಿಟಿವ್ ಬಂದಿದೆ. ಶಾಲೆಯನ್ನು ಈಗಾಗಲೇ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರಿಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಔಷಧ ಕಿಟ್‌ಗಳನ್ನು ನೀಡಲಾಗಿದೆ. ವರದಿ ಬಾಕಿ ಇರುವವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಪಪಂ ಮುಖ್ಯಾಧಿಕಾರಿ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಬ್ಬಂದಿ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net