ಹೊಸ ವರ್ಷಾಚರಣೆಗೆ ಬ್ರೇಕ್; ಹಂಪಿ ಸ್ಮಾರಕಗಳಿಗೆ ಭೇಟಿ ನೀಡಲು ನಿರ್ಬಂಧವಿಲ್ಲ

Hampi Devoters Visit after 2nd wave
ಎರಡು ತಿಂಗಳ ಬಳಿಕ ಹಂಪಿ ವಿರೂಪಾಕ್ಷೇಶ್ವರ ದೇಗುಲಕ್ಕೆ ಸೋಮವಾರ ಹರಿದು ಬಂದಿದ್ದ ಭಕ್ತರು.
Published on

ಹೊಸಪೇಟೆ: ಸರ್ಕಾರದ ಆದೇಶದಂತೆ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದ್ದು, ಪ್ರವಾಸಿ ತಾಣಗಳಿಗೆ ಜನರು ಭೇಟಿ ನೀಡಲು ಯಾವುದೇ ನಿರ್ಬಂಧವಿಲ್ಲ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದರು.

ನಗರದ ಎಸ್ಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರ್ಕಾರ ತಜ್ಞರ ಸಲಹೆ ಮೇರೆಗೆ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಜಿಲ್ಲೆಯಲ್ಲೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಂಪಿ, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್, ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನೆಲೆಯಲ್ಲಿ ಆ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net