ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಬೆಂಕಿ ಅವಘಡ

Hospet Fire
ಹೊಸಪೇಟೆಯ ಉಡುಪಿ ಶ್ರೀಕೃಷ್ಣ ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಅಗ್ನಿ ಶಾಮಕ ಸಿಬ್ಬಂದಿ ನಂದಿಸಿದರು.
Published on

ಹೊಸಪೇಟೆ: ನಗರದ ಹೃದಯ ಭಾಗದಲ್ಲಿರುವ ಉಡುಪಿ ಶ್ರೀಕೃಷ್ಣ ಹೋಟೆಲ್‌ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿತು. ಹೊಟೇಲ್‌ನ ಅಡುಗೆ ಮನೆಯ ಬಾಯ್ಲರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇತರೆಡೆ ಹರಡುವುದರೊಳಗೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿತು. 10ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳನ್ನು ಬೇರೆಕಡೆ ಶಿಫ್ಟ್ ಮಾಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net