ಮುಷ್ಕರದಿಂದ ವಿದ್ಯಾಭ್ಯಾಸಕ್ಕೆ ತೊಂದರೆ

201221 Hospete Students Appal
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹೊಸಪೇಟೆ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರಾಚಾರ್ಯ ಬಿ.ಜಿ.ಕನಕೇಶಮೂರ್ತಿಗೆ ಮನವಿ ಸಲ್ಲಿಸಿದರು.
Published on

ಹೊಸಪೇಟೆ: ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಸಮಸ್ಯೆ ಉಂಟಾಗಿದ್ದು, ಕೂಡಲೇ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಶ್ರೀ ಶಂಕರ್ ಆನಂದ ಸಿಂಗ್ ಪದವಿ ಕಾಲೇಜು ಪ್ರಾಚಾರ್ಯ ಬಿ.ಜಿ.ಕನಕೇಶಮೂರ್ತಿಗೆ ವಿದ್ಯಾರ್ಥಿಗಳು ಸೋಮವಾರ ಮನವಿ ಸಲ್ಲಿಸಿದರು. ಒಂದು ವಾರದಿಂದ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ತರಗತಿಗಳು ನಡೆಯದೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ, ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು. ವಿದ್ಯಾರ್ಥಿಗಳಾದ ಐಶ್ವರ್ಯಾ ಹಡಪದ, ಪಿ.ಶ್ವೇತಾ, ಟಿ.ಸುದೀಪ್, ಎಚ್.ಶಾಲಿನಿ, ಅಶ್ವಿನಿ, ಶಂಕರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net