ಪ್ರವಾಸಿ ತಾಣಗಳಾದ ಹಂಪಿ, ಡ್ಯಾಂ, ಜೂಲಾಜಿಕಲ್ ಪಾರ್ಕ್‌ಗೆ ಜನರ ದಂಡು

010122 Hampi Zoo Tourist Visit
ಹೊಸ ವರ್ಷದ ಹಿನ್ನೆಲೆಯಲ್ಲಿ ಹಂಪಿ, ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿರುವುದು.
Published on

ಹೊಸಪೇಟೆ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು.

ಬೆಳಗ್ಗೆಯಿಂದಲೇ ಹಂಪಿಯ ಕಡೆಗೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಪ್ರವಾಸಿಗರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಕಮಲಾಮಹಲ್, ಮಹಾನವಮಿ ದಿಬ್ಬ, ಸಾಸಿವೆ ಕಾಳು ಗಣಪ, ಕಡಲೆ ಕಾಳು ಗಣಪ, ಕಲ್ಲಿನ ರಥ, ವಿಜಯವಿಠ್ಠಲ ದೇವಸ್ಥಾನ, ಉಗ್ರನರಸಿಂಹ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಮಧ್ಯಾಹ್ನ ಕಮಲಾ ಮಹಲ್ ಆವರಣದಲ್ಲಿನ ವಿಶಾಲವಾದ ಉದ್ಯಾನದಲ್ಲಿ ಭೋಜನ ಸವಿದರು. ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್‌ಗೆ ಭೇಟಿ ನೀಡಿದ ಪ್ರವಾಸಿಗರು ಪ್ರಾಣಿಗಳನ್ನು ವೀಕ್ಷಿಸಿ ಸಂತಸಪಟ್ಟರು.

ಮಾರ್ಗಸೂಚಿ ಉಲ್ಲಂಘನೆ: ಪ್ರವಾಸಿ ತಾಣಗಳಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಯ್ದುಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದ್ದರೂ ಬಹುತೇಕ ಪ್ರವಾಸಿಗರು ಮಾಸ್ಕ್ ಧರಿಸದೆ ಸುತ್ತಾಡುತ್ತಿರುವುದು ಕಂಡು ಬಂತು.

ಕಳೆದ ವರ್ಷಕ್ಕಿಂತ ಕಡಿಮೆ: ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಹೊಸ ವರ್ಷದ ದಿನ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ನೈಟ್ ಕರ್ಫ್ಯೂ ಹಾಗೂ ಒಮಿಕ್ರಾನ್ ಭೀತಿಯಿಂದಾಗಿ ಹೊರ ರಾಜ್ಯಗಳ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಸ್ಥಳೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಹಂಪಿಗೆ ಭೇಟಿ ನೀಡಿದ್ದಾರೆ ಎಂದು ಪ್ರವಾಸಿ ಮಾರ್ಗದರ್ಶಿ ಗೋಪಾಲ ಹಂಪಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net