ಆಧಾರ್ ಜೋಡಣೆ ಶೇ.78 ಪ್ರಗತಿ

T Venkatesh DC Vijayanagara Dist.
ಟಿ.ವೆಂಕಟೇಶ, ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲಾ.
Published on

ಹೊಸಪೇಟೆ: ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 10.5 ಲಕ್ಷ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಕರಡು ಮತದಾರರ ಪಟ್ಟಿ ಪ್ರಕಟ ಕುರಿತು ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಡಿ.8ರವರೆಗೆ ಆಕ್ಷೇಪಣೆಗಳು, ತಿದ್ದುಪಡಿ ಹಾಗೂ ಹೊಸದಾಗಿ ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದೇ ಅವಧಿಯಲ್ಲಿ ಬರುವ ಎರಡನೇ ಶನಿವಾರ, ಭಾನುವಾರ ವಿಶೇಷ ಪರಿಷ್ಕರಣೆ ಮಾಡಲಾಗುತ್ತದೆ. ಡಿ.26 ರಂದು ಆಕ್ಷೇಪಣೆಗಳನ್ನು ಇತ್ಯರ್ಥ ಗೊಳಿಸಲಾಗುವುದು. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 5,29,785 ಪುರುಷ ಹಾಗೂ 5,27,574 ಮಹಿಳಾ ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಮಾಡಲಾಗುತ್ತಿದ್ದು, ಐದು ವಿಧಾನಸಭಾ ಕ್ಷೇತ್ರಗಳಲ್ಲಿ 8,26,701 ಮತದಾರರ ಆಧಾರ್ ಜೋಡಣೆ ಮಾಡಲಾಗಿದೆ. 2,30,658 ಬಾಕಿ ಇದ್ದು ಶೇ 78.19 ಪ್ರಗತಿಯಾಗಿದೆ ಎಂದರು.

ಸಹಾಯಕ ಆಯುಕ್ತ ಸಿದ್ದಾರಾಮೇಶ್ವರ, ತಹಸೀಲ್ದಾರ್ ವಿಶ್ವಜೀತ್ ಮೆಹತಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net